ಹಿರಿಯ ವಿದ್ವಾಂಸ ಡಾ. ವಿವೇಕ್ ರೈಗೆ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ ಗೌರವ
Feb 14 2025, 12:31 AM ISTಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ಹಿರಿಯ ವಿದ್ವಾಂಸ, ಚಿಂತಕ ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ.ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.