ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ
Sep 19 2024, 01:54 AM ISTವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.