18ರಂದು ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ
Aug 14 2024, 12:58 AM ISTತುಳು ಭಾಷೆ, ಸಂಸ್ಕೃತಿ, ಸಾಹಿತ್ಯಕ್ಕಾಗಿ ಅಪಾರ ಸೇವೆ ಸಲ್ಲಿಸಿದ, ತುಳು ಚಳುವಳಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡ, ಹಿರಿಯ ಸಾಹಿತ್ಯ ಚೇತನ ದಿ. ಶ್ರೀನಿವಾಸ ಉಪಾಧ್ಯಾಯ ಪಣಿಯಾಡಿ ಅವರ ಸ್ಮರಣಾರ್ಥ ತುಳುಕೂಟವು ತುಳುನಾಡಿನ ಸಾಂಸ್ಕೃತಿಕ, ಸಾಮಾಜಿಕ ಬದುಕಿನ ಮೇಲೆ ಬೆಳಕು ಚೆಲ್ಲುವ ತುಳು ಕಾದಂಬರಿಗೆ ಕಳೆದ 29 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ.