ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡಪ್ರಭ 2023ನೇ ಸಾಲಿನ ಸಮಗ್ರ ಕೃಷಿಯಲ್ಲಿ ರೈತ ರತ್ನ ಪ್ರಶಸ್ತಿ ವಿಜೇತರಾದ ಹಾಗೂ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ಪ್ರಗತಿಪರ ರೈತ ಧನಪಾಲ ಯಲ್ಲಟ್ಟಿ ಅವರು ಭಾರತೀಯ ಸಕ್ಕರೆ ತಂತ್ರಜ್ಞಾನ ಸಂಸ್ಥೆ ಕೊಡಮಾಡುವ ರೈತ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.