ಕನ್ನಡ ಪ್ರಭ-ಸುವರ್ಣ ನ್ಯೂಸ್ ಪ್ರಶಸ್ತಿ ಪುರಸ್ಕೃತ ಜಾಧವಗೆ ಸನ್ಮಾನ
Mar 14 2024, 02:00 AM ISTದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಅವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ, ಕ್ರೀಡಾಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮಿಂಚುವಂತೆ ಮಾಡಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಭಾಗದ ಸರ್ಕಾರಿ ಕಾಲೇಜುಗಳ ಅಧ್ಯಕ್ಷರ ಸಂಘದ ಅಧ್ಯಕ್ಷರು ಹಾಗೂ ಬಸವನಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು.