ಜು.22ರಿಂದ ಸಂಸತ್ತಿನ ಮುಂಗಾರು ಅಧಿವೇಶನ : ಜು.23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್
Jul 21 2024, 01:21 AM ISTಸಂಸತ್ತಿನ ಮುಂಗಾರು ಅಧಿವೇಶನ ಜು.22ರಿಂದ ಆರಂಭವಾಗಲಿದ್ದು, ಆ.12ರ ವರೆಗೂ ನಡೆಯಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜು.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಸೋಮವಾರ ನಿರ್ಮಲಾ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.