• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಷಟಲ್‌ ರೀತಿ ಎಲ್ಲೆಡೆ ನಿಲ್ಲುವ ಎಕ್ಸ್‌ಪ್ರೆಸ್‌ ಬಸ್!

Jan 09 2025, 12:45 AM IST
ಚಾಮರಾಜನಗರದಿಂದ ಮೈಸೂರು, ಗುಂಡ್ಲುಪೇಟೆಯಿಂದ ಮೈಸೂರಿಗೆ ಸಂಚರಿಸುವ ಕೆಎಸ್‌ಆರ್‌ಟಿಸಿ ಎಕ್ಸ್‌ಪ್ರೆಸ್‌ ಬಸ್‌ ಷಟಲ್‌ ಬಸ್‌ನಂತೆ ಹೆದ್ದಾರಿಯಲ್ಲಿ ಸಿಗುವ ಬಹುತೇಕ ಎಲ್ಲ ಹಳ್ಳಿಗಳ ಗೇಟ್‌ ಬಳಿ ನಿಲ್ಲುತ್ತಿದೆ. ಇದೇನು ಎಕ್ಸ್‌ಪ್ರೆಸ್‌ ಬಸ್ಸಾ, ಷಟಲ್‌ ಬಸ್ಸಾ ಎಂಬ ಪ್ರಶ್ನೆ ಎದ್ದಿದೆ.!

ಬಸ್ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ

Jan 09 2025, 12:45 AM IST
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಜನವರಿ ೧೦ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ತಮ್ಮ ಘೋಷಣೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚು ಮಾಡುತ್ತಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಸ್ ಪ್ರಯಾಣದ ಹೆಚ್ಚಿಸಿರುವುದು ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದರು.

ಬಸ್ ದರ ಹೆಚ್ಚಳ ವಿರೋಧಿಸಿ ಆರ್ ಪಿಐ ನಿಂದ ಪ್ರತಿಭಟನೆ

Jan 09 2025, 12:45 AM IST
ಸಾಮಾನ್ಯ, ಮಧ್ಯಮ ಮತ್ತು ಕೆಳವರ್ಗದ ಜನ ಪ್ರಯಾಣಿಸುವ ಬಸ್ ದರ ಏರಿಕೆ ಮಾಡಿರುವುದಕ್ಕೆ ತಾವು ಕೂಡಲೇ ಜನರ ಕ್ಷಮೆ ಕೇಳಿ ದರ ಏರಿಕೆ ನಿರ್ಧಾರ ಕೈಬಿಡಬೇಕು. ಇಲ್ಲವಾದಲ್ಲಿ ತಮ್ಮ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯದಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಆಕ್ರೋಶ

Jan 08 2025, 12:19 AM IST
ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಟಿಕೆಟ್ ದರ ಹೆಚ್ಚಳ ಖಂಡಿಸಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ

Jan 08 2025, 12:18 AM IST
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎಂಡಬ್ಲ್ಯೂಕೆಆರ್‌ಸಿ ಹಾಗೂ ಕೆಕೆಆರ್‌ಟಿಸಿ ಸೇರಿದಂತೆ ರಾಜ್ಯದ ಎಲ್ಲ ಸಾರಿಗೆಯ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಅದರಲ್ಲೂ ವಿಶೇಷವಾಗಿ ಕಾರ್ಮಿಕ ವರ್ಗ, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂದು ಟೀಕಿಸಿದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jan 08 2025, 12:17 AM IST
. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 08 2025, 12:16 AM IST
ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ದರ ಶೇ.೧೫ ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಸ್ ನಿಲ್ದಾಣದಲ್ಲಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

Jan 08 2025, 12:15 AM IST
ಪ್ರಯಾಣಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಸ್ಥಳೀಯ ಆಡಳಿತ ಹಾಗೂ ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ

ಬಸ್ ಪ್ರಯಾಣ ದರ ಹೆಚ್ಚಳ: ಬಡವರು, ಕಾರ್ಮಿಕರಿಗೆ ಹೊರೆ

Jan 07 2025, 12:34 AM IST
ಬಸ್‌ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯಬೇಕು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಶಿರಹಟ್ಟಿ ಪಟ್ಟಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಸ್‌ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ

Jan 07 2025, 12:31 AM IST
ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಸೋಮವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ಕೈಗೊಂಡರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved