ನರ್ಮ್ ಬಸ್ ಓಡಾಟ ಹೆಚ್ಚಿಸಲು ಡಿಸಿಗೆ ಬಿಜೆಪಿ ಯುವ ಮೋರ್ಚಾ ಮನವಿ
Jun 25 2025, 12:33 AM ISTಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಇದರಿಂದ ಜನತೆಗೆ ತೀವ್ರ ತೊಂದರೆಯಾಗಿರುತ್ತದೆ. ಆದ್ದರಿಂದ ತಕ್ಷಣ ಅವುಗಳನ್ನು ಪುನರಾರಂಭಿಸಬೇಕು ಎಂದು ಉಡುಪಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.