ಈಗಲೂ 60 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಬಂಡಾಯ ಗುಂಪಿನ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್‌ನವರು ಕಾಮಗಾರಿಗಳಿಗೆ ಶೇ.60 ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, 'ಕೆಕೆಆರ್‌ಡಿಬಿ ಯಲ್ಲಿ ಕಾಮಗಾರಿಗಳ ಗುತ್ತಿಗೆಗೆ ಶಾಸಕರು ಶೇ.20ರಷ್ಟು ಕಮಿಷನ್ ಕೇಳುತ್ತಿದ್ದಾರೆ' ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಸ್ಫೋಟಕ ಆರೋಪ ಮಾಡಿದ್ದಾರೆ.