ಸಾಂಬಾರ್‌ನಲ್ಲಿ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು
Nov 20 2023, 12:45 AM ISTಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ತೀವ್ರವಾಗಿ ಗಾಯದಿಂಡಿದ್ದ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.ನ.16ರಂದು ಬಿಸಿಯೂಟದ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಶೇ.50ರಷ್ಟು ಅಧಿಕ ಸುಟ್ಟಗಾಯ ಅನುಭವಿಸಿದ್ದ ಮಹಾಂತಮ್ಮಳನ್ನು ಕಲಬುರಗಿ ನಗರದ ಜಿಮ್ಸ್, ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೂ ಸುಟ್ಟ ಗಾಯಗಳ ತೀವ್ರತೆಯೇ ಹೆಚ್ಚಾಗಿ ಆಕೆ ಅಲ್ಲಿನ ವೈದ್ಯರ ಚಿಕಿತ್ಸೆಗೂ ಸ್ಪಂದಸದೆ ಕೊನೆಯುಸಿರು ಎಳೆದಿದ್ದಾಳೆ.