ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ೨೦ ವರ್ಷ ಜೈಲು
Nov 30 2023, 01:15 AM ISTಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹ ೧.೩೦ ಲಕ್ಷ ದಂಡ ವಿಧಿಸಿ ಹಾವೇರಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ತಡಸ ಗ್ರಾಮದ ಮಣಿಕಂಠ ಧರ್ಮಪ್ಪ ವಾಲಿಕಾರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 2020ರ ಮಾ. ೧೫ ರಂದು ಅಪಹರಣಮಾಡಿಕೊಂಡು ಹೋಗಿ, ರಾಣಿಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ಮನೆಯಲ್ಲಿ ಹಾಗೂ ತಡಸ ಗ್ರಾಮದ ಹೊಲದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಜೀವ ಬೆದರಿಕೆ ಹಾಕಿದ ಅಪರಾಧಕ್ಕಾಗಿ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್. ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.