ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಧನ ಖಂಡಿಸಿ ಪ್ರತಿಭಟನೆ
Jul 13 2024, 01:32 AM ISTನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.