ಅಸಮರ್ಪಕ ಯೂರಿಯಾ ವಿತರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jul 31 2025, 12:45 AM IST
ಕೇಂದ್ರ ಸರ್ಕಾರವು ನೀಡಿರುವ ರಸಗೊಬ್ಬರವನ್ನು ರೈತರಿಗೆ ಸರಿಯಾಗಿ ಹಂಚಿಕೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದ ವತಿಯಿಂದ ಬುಧವಾರ ಸಂತೇಪೇಟೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಾರ್ಯಾಲಯದ ಮುಂದೆ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಸಗೊಬ್ಬರ ಕಾಳದಂಧೆ ನಡೆಯುತ್ತಿದೆ. ರೈತರು ಎರಡುಪಟ್ಟು, ಮೂರುಪಟ್ಟು ಹಣ ನೀಡಿ ಯುರಿಯಾ ಗೊಬ್ಬರವನ್ನು ಖರೀದಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ನೀಡದೆ ಕಳಪೆ ಬಿತ್ತನೆ ಬೀಜ ನೀಡಿದ್ದು, ರೈತರು ಕಂಗಾಲಾಗಿ ಪರದಾಡುತ್ತಿದ್ದಾರೆ. ಇದರ ಪರಿಣಾಮವೇ ಇಂದು ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದರು.