ಸುರಪುರ ಶಾಸಕರಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ವೆಂಕಟಪ್ಪ ನಾಯಕ್ ನಿಧನದಿಂದಾಗಿ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಮೇ7ರಂದು ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ನರಸಿಂಹ ನಾಯಕ್ (ರಾಜೂಗೌಡ)ರನ್ನು ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದೆ.
ರೈತ ಸಮುದಾಯ ಮತ್ತು ದುಡಿಯುವ ವರ್ಗವನ್ನು ನಿರ್ಲಕ್ಷ್ಯ ಮಾಡಿರುವ ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ ರೈತರನ್ನು ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ರಾಜ್ಯದ ಎಲ್ಲ ೨೮ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ತಾಯಿಯಂತೆ ಭಾವಿಸಿದ ರಾಜ್ಯ ಬಿಜೆಪಿ ಇಂದು ಕುಟುಂಬ ರಾಜಕಾರಣಕ್ಕೆ ಸಿಲುಕಿರುವುದು ನೋಡಲಾಗುತ್ತಿಲ್ಲ. ಹಲವು ಬಾರಿ ಬೇಸರವಾದರೂ ಪಕ್ಷದ ಕಾರಣದಿಂದ ಸುಮ್ಮನಾಗಿದ್ದೆ. ಆದರೆ ಇದೀಗ ಕಾಲ ಕೂಡಿಬಂದಿದ್ದು, ಹೋರಾಟಕ್ಕೆ ಮುಂದಾಗಿದ್ದೇನೆ. ಚುನಾವಣೆಗಾಗಿ ಮಾತ್ರ ಪಕ್ಷ.