ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್ ಬೇಸರ
Dec 14 2023, 01:30 AM ISTಹುಬ್ಬಳ್ಳಿಇಡೀ ಕರ್ನಾಟಕದಲ್ಲಿ ಬಿಜೆಪಿ ಶಕ್ತಿಶಾಲಿಯಾಗಿದೆ. ಆದರೆ ಹೈಕಮಾಂಡ್ಗೆ ರಾಜ್ಯ ಬಿಜೆಪಿ ಮೇಲೆ ಬೇಸರ ಇದೆ. ಇದು ನಿಜ. ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆ ರಾಷ್ಟ್ರೀಯ ಮುಖಂಡರು ಬಹಳ ಬೇಸರಗೊಂಡಿದ್ದಾರೆ. ಆದರೆ, ಅವರ ನಿಯಂತ್ರಣ ಇಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೆಲವರಲ್ಲಿ ಅಸಮಾಧಾನ ಇರುವುದೂ ನಿಜ. ಅವರೆಲ್ಲರೂ ಪಕ್ಷ ನಿಷ್ಠರೇ ಹೊರತು ಬಂಡಾಯಗಾರರಲ್ಲ, ಅವರು ವೈಯಕ್ತಿಕ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆ.