ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆರ್‌ಎಸ್‌ಎಸ್‌ನ ಸಹ ಸರಕಾರ್ಯವಾಹ ಅರುಣ್ ಕುಮಾರ್ ತಿಳಿಸಿದ್ದಾರೆ.
ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಖಂಡನೀಯ, ಆ ಶಾಸಕರೇನು ಭಯೋತ್ಪಾದಕರಾ ಅಥವಾ ನಕ್ಸಲರಾ? ತಕ್ಷಣ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.