ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಆಡಳಿತ ಇರುವ ಛತ್ತೀಸಗಢದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ತಲೆಗೆ 43 ಲಕ್ಷ ರು. ಇನಾಮು ಹೊಂದಿದ್ದ ಇಬ್ಬರು ಮಹಿಳೆಯರು ಸೇರಿದಂತೆ 9 ನಕ್ಸಲರು ಶನಿವಾರ ಪೊಲೀಸರಿಗೆ ಶರಣಾಗಿದ್ದಾರೆ