ನಾಳೆ ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
Apr 16 2025, 12:42 AM ISTಬಾಗಲಕೊಟೆಯಲ್ಲಿ ಏ.17ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿಯ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.