ಸಿಎಂ, ಡಿಕೆಶಿ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ಗೆ ಬಿಜೆಪಿ ಮುಖಂಡ ದೂರು
Aug 14 2025, 02:09 AM ISTಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಪರ ಮತದಾರರಿಗೆ ಹಣ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇತರೆ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ವಕೀಲ ಹಾಗೂ ಹೊಳೆನರಸೀಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.