ಬಿಜೆಪಿಗರು ವಿನಾಕಾರಣ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲು ಪ್ರಶ್ನಿಸಲಿ, ಬಿಜೆಪಿ ಸುಳ್ಳುಗಾರರ ಪಕ್ಷ, ಅವರಿಗೆ ಸಾರಿಗೆ ಇಲಾಖೆಯ ನೌಕರರ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಭ್ರಷ್ಟಾಚಾರ, ದಲಿತರ ಹಣ ಲೂಟಿ, ಮುಸ್ಲಿಮರ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಕೈಗೊಂಡಿರುವ ಜನಾಕ್ರೋಶ ಯಾತ್ರೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು