ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿದ್ದ 5 ಚುನಾವಣೆಯಲ್ಲಿ ಯೋಗೇಶ್ವರ್ ನಾಲ್ಕು ಬಾರಿ ಸೋಲಿನ ಸುಳಿಗೆ ಸಿಲುಕಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದಾಗ ಒಮ್ಮೆಯೂ ಸೋಲು ಅನುಭವಿಸಿಲ್ಲ ಎಂಬುದು ವಿಶೇಷ.
ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡರಲ್ಲಿ ಸ್ಪರ್ಧಿಸಿದ್ದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ಹೀನಾಯ ಸೋಲಿಗೆ ಪಕ್ಷದಲ್ಲಿನ ಬಣ ರಾಜಕೀಯ ಕಾರಣವಾಯಿತೇ ಎಂಬ ಚರ್ಚೆ ಆರಂಭವಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.