ಆಶ್ರಯಮನೆ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ
Sep 12 2025, 12:06 AM ISTಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ೩ ಕೋಟಿ ರು.ಗಳಿಗೂ ಹೆಚ್ಚು ಅವ್ಯವಹಾರದ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ೨೧೯ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ತಲುಪಬೇಕಿದ್ದ ಸರ್ಕಾರದ ಅನುದಾನವನ್ನು ಅಧಿಕಾರಿಗಳೇ ದುರುಪಯೋಗ ಮಾಡಿಕೊಂಡಿದ್ದಾರೆ. ಯೋಜನೆಯ ಅನುಷ್ಠಾನದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಮಟ್ಟದ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ದೂರಿದರು.