ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು.
ಒಟ್ಟಾರೆಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಕಾಂಗ್ರೆಸ್ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.
ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.