ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.
ವಕ್ಫ್ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.