ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಬಿಬಿಎಂಪಿಯ 19 ಪದವಿ ಪೂರ್ವ ಕಾಲೇಜಿನ 2,345 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಈ ಪೈಕಿ 1,645 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.70.15 ರಷ್ಟು ಫಲಿತಾಂಶ ಬಂದಿದೆ ಎಂದು ಬಿಬಿಎಂಪಿ ತಿಳಿಸಿದೆ.