ಪ್ರಯಾಣಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ
Sep 29 2024, 01:37 AM ISTಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಡೋರ್ ತೆಗೆದು ಹೊರಗೆ ಬಂದು ನೋಡನೋಡುತ್ತಿದ್ದಂತೆ ಕಾರು ಧಗ ಧಗನೆ ಹೊತ್ತಿ ಉರಿದು, ಕರಕಲಾದ ಘಟನೆ ತಾಲೂಕಿನ ಹೆರಗು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣ, ಪುಟ್ಟ ಗಾಯವಾಗಿದೆ. ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ನಂದಿಸಲು ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಕಾರು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿತ್ತು.