ಪ್ರತಿಕೃತಿ ದಹನ ವೇಳೆ ಕಾರ್ಯಕರ್ತರಿಗೆ ತಗುಲಿದ ಬೆಂಕಿ
Aug 20 2024, 01:01 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಡಳಿತ ಭವನ ಎದುರು ರಾಜ್ಯಪಾಲರ ಪ್ರತಿಕೃತಿ ದಹನ ಮಾಡುತ್ತಿದ್ದಾಗ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗುಲಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಾಳುಗಳು ಎಂದು ತಿಳಿದು ಬಂದಿದೆ.