ಸ್ಫೋಟ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ
Mar 05 2024, 01:30 AM ISTಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.