ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರನ್ನು ತನ್ನ ವ್ಯಾಪ್ತಿಯಿಂದ ಕೈಬಿಟ್ಟು ಏಜೆನ್ಸಿಗೆ ವಹಿಸುವ ಮೂಲಕ ವೃತ್ತಿ ಅಭದ್ರತೆಯ ಕೂಪಕ್ಕೆ ತಳ್ಳಲು ಹೊರಟಿದೆ.
ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯದಲ್ಲಿ ರಾಜಧಾನಿಯ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ₹20 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.
ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ ಟಿ ಚಂದ್ರು ತಿಳಿಸಿದರು.
ಪ್ರತಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿ ದರ ಹೆಚ್ಚಿಸುವ ಚಾಳಿಯನ್ನು ಖಾಸಗಿ ಬಸ್ ಮಾಲೀಕರು ಮುಂದುವರಿಸಿದ್ದು, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವವರಿಗೆ ಮತ್ತೆ ದುಬಾರಿ ಪ್ರಯಾಣ ದರ ವಸೂಲಿಗೆ ಮುಂದಾಗಿದ್ದಾರೆ.
ಮಹಿಳೆ ರಾಜಕೀಯ, ವೈದ್ಯಕೀಯ, ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಸಂವೇದನೆ ಹೆಚ್ಚು. ತನಗಿಂತಲೂ ಸಮಾಜದ ಬಗ್ಗೆ ಚಿಂತನೆ ಮಾಡುತ್ತಾರೆ ಎಂದು ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆಯನ್ನು ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಅಂಕಿತ ಹಾಕಲು ನಿರಾಕರಿಸಿದ್ದು, ವಾಪಸು ಕಳುಹಿಸಿದ್ದಾರೆ.