ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಹೀಗಾಗಿ ಈ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಚುನಾವಣೆಗಾಗಿ ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರೊ ಕಬಡ್ಡಿ 12ನೇ ಆವೃತ್ತಿಯು ರೋಚಕ ಘಟ್ಟ ತಲುಪಿರುವ ಸಮಯದಲ್ಲಿ ಬೆಂಗಳೂರು ಬುಲ್ಸ್ ಹ್ಯಾಟ್ರಿಕ್ ಗೆಲುವಿನೊಂದಿಗೆ ನೇರವಾಗಿ ಪ್ಲೇ-ಆಫ್‌ಗೆ ಅರ್ಹತೆ ಪಡೆಯುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.