ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ಹೇಳಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಒತ್ತಡ ಕಡಿಮೆ ಮಾಡಲು ಉದ್ದೇಶಿತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ಎಂಟ್ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಆಸುಪಾಸಿನಲ್ಲಿರುವ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರಿಂದ ಆ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.