ಬೆಂಗಳೂರು ಮಹಾನಗರ ಪಾಲಿಕೆಯನ್ನು ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಅಂಕಿತ ಹಾಕಲು ನಿರಾಕರಿಸಿದ್ದು, ವಾಪಸು ಕಳುಹಿಸಿದ್ದಾರೆ.
ದೆಹಲಿಯಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಏರ್ ಇಂಡಿಯಾ ವಿಮಾನ ಇನ್ನೇನು ರನ್ವೇಯಲ್ಲಿ ಇಳಿಯಬೇಕು ಎನ್ನುವಾಗ ಮಾರ್ಗ ಬದಲಿಸಿ ಚೆನ್ನೈನಲ್ಲಿ ಇಳಿದಿದೆ.
ಕಳೆದ ವರ್ಷ ಸರ್ಕಾರದಿಂದ ಆಯೋಜಿಸಿದ್ದ ಕೊಪ್ಪಳ ಜಿಲ್ಲೆಯ ‘ಕನಕಗಿರಿ ಉತ್ಸವ’ ನಡೆಸಿಕೊಟ್ಟಿದ್ದ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕನಿಗೆ ₹3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ಐವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.