ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಹಲವು ಅಚ್ಚರಿಗಳ ಅಖಾಡ
Apr 03 2024, 01:33 AM IST2008ರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಕಣ್ಮರೆಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು.ಅದಕ್ಕೂ ಮುನ್ನ ರಾಮನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು (ಹಿಂದಿನ ಸಾತನೂರು ಕ್ಷೇತ್ರವನ್ನೂ ಒಳಗೊಂಡು), ಬೆಂಗಳೂರಿನ ಉತ್ತರಹಳ್ಳಿ, ಆನೇಕಲ್ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡ ಕನಕಪುರ ಲೋಕಸಭಾ ಕ್ಷೇತ್ರವು ಅಸ್ತಿತ್ವದಲ್ಲಿ ಇತ್ತು. ದೇಶದಲ್ಲಿಯೇ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಖ್ಯಾತಿ ಇದರದ್ದಾಗಿತ್ತು.