ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ಸುವರ್ಣಸೌಧ ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಧಿವೇಶನಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕೆಲವು ಬಾಡಿಗೆ ಹೋರಾಟಗಾರರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎನ್ನುತ್ತಿದ್ದಾರೆ.
ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ, 5 ಯುವಕರನ್ನು ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಜಾರಕಿಹೊಳಿ ಪೆನಲ್ನಲ್ಲಿ ಗುರುತಿಸಿಕೊಂಡಿರುವ 9 ಜನರು ಸಹ ಅವಿರೋಧ ಆಯ್ಕೆಯಾಗಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು