ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್; ಬೆಳಗಾವಿ ಜಿಲ್ಲಾ ತಂಡಕ್ಕೆ 29 ಪದಕ
Aug 12 2024, 01:33 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಇಂಡಿಯಾ ಟೇಕ್ವಾಂಡೋ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಕರ್ನಾಟಕ ಟೇಕ್ವಾಂಡೋ ಸಂಸ್ಥೆ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ೪೧ನೇ ರಾಜ್ಯ ಮಟ್ಟದ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ೧೦ನೇ ಕೆಡೆಟ್ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಕ್ರೀಡಾಪಟುಗಳು 3 ಚಿನ್ನ, 8 ಬೆಳ್ಳಿ ಮತ್ತು 18 ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.