ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಳಗಾವಿ, ಚಿಕ್ಕೋಡಿ ಕುಸಿತ
May 10 2024, 01:41 AM ISTಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಫಲಿತಾಂಶ ಕುಸಿದಿದೆ. ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೇ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನದಲ್ಲಿದ್ದರೇ, ಬೆಳಗಾವಿ ಶೈಕ್ಷಣಿಕ ಜಿಲ್ಲೆ 29ನೇ ಸ್ಥಾನದಲ್ಲಿದೆ. ಹಿಂದುಳಿದ ಜಿಲ್ಲೆ ಎನ್ನುವ ಖ್ಯಾತಿಯನ್ನು ಮುಂದುವರೆಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಫಲಿತಾಂಶ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ.ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಈ ಬಾರಿ 25ನೇ ಸ್ಥಾನಗಳಿಸುವ ಮೂಲಕ 12ನೇ ಸ್ಥಾನ ಕುಸಿತ ಕಂಡಿದೆ. 26ನೇ ಸ್ಥಾನದಲ್ಲಿದ್ದ ಬೆಳಗಾವಿ 3ನೇ ಸ್ಥಾನ ಕುಸಿದಿದೆ.