ಡಿಸೆಂಬರ್ 17ಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬುದ್ಧಿಮಾಂದ್ಯರ ಸತ್ಯಾಗ್ರಹ: ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಶಂಕರ್
Dec 09 2024, 12:47 AM ISTಶ್ರವಣದೋಷವುಳ್ಳವರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಯ ತಾಲೂಕಿನಲ್ಲಿರುವ ಕಿವುಡರು, ಬುದ್ದಿ ಮಾಂದ್ಯರು ಡಿ.೧೭ಕ್ಕೆ ಬೆಳಗಾವಿಗೆ ಬಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಎಚ್.ಶಂಕರ್ ತಿಳಿಸಿದರು. ಹಾಸನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.