ಬೆಳಗಾವಿ ಮೇಲೆ ಬಿಜೆಪಿಯ ಮತ್ತಷ್ಟು ಬಿಗಿ ಹಿಡಿತ
Jun 05 2024, 12:30 AM ISTಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ. ಈ ಮೂಲಕ ಬೆಳಗಾವಿ ಕ್ಷೇತ್ರದ ಮೇಲೆ ಬಿಜೆಪಿ ಮತ್ತಷ್ಟು ಬಿಗಿ ಹಿಡಿತ ಸಾಧಿಸಿದೆ. ಕಾಂಗ್ರೆಸ್‌ನ ಹುರಿಯಾಳು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ ಅವರಿಗೆ ಸೋಲುಂಟಾಗಿದೆ. ಬಿಜೆಪಿಯ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.