ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘದಿಂದ ಮನವಿ

Oct 24 2024, 12:35 AM IST
ಮೊಳಕಾಲ್ಮುರು: ಭಾರೀ ಮಳೆಯಿಂದ ಬೆಳೆ ನಷ್ಟವಾಗಿದ್ದು ಸರ್ಕಾರ ಕೂಡಲೇ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಬುಧವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿರು.ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳದ ನೀರು ಜಮೀನುಗಳಿಗೆ ನುಗ್ಗಿ ಫಸಲು ಕೊಚ್ಚಿಕೊಂಡು ಹೋಗಿದ್ದು ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಸಾಲ ಮಾಡಿ ಬೆಳೆ ಇಟ್ಟರೂ ಕಾಯಿ ಕಟ್ಟುವ ಮೊದಲೇ ಬೆಳೆ ಹಾಳಾಗಿರುವುದು ರೈತರನ್ನು ಸಮಸ್ಯೆಗೆ ದೂಡಿದೆ. ಹೀಗಿದ್ದರೂ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರೈತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ಆರೋಪಿಸಿದರು.