ಮಹಾ ಮಳೆಗೆ ಬೆಳೆ ನೀರು ಪಾಲು
Jul 31 2024, 01:02 AM ISTಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆ ಆಗಿದೆ. ಆದರೂ ಘಟಪ್ರಭಾ ನದಿಗೆ ೪೩,೭೫೪ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕಂದಾಯ, ಪೊಲೀಸ್ ಇಲಾಖೆ ಸೇರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಈಗಾಗಲೇ ನದಿ ನೀರು ಹೊಲಗಳಿಗೆ ನುಗ್ಗಿ ಬೆಳೆ ಹಾನಿಯಾಗಿ ಅನ್ನದಾತರನ್ನು ಕಂಗಾಲಾಗಿಸಿದೆ.