ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: ಬೈಕ್, 4 ಅಂಗಡಿಗಳಿಗೆ ಬೆಂಕಿ!
Sep 12 2024, 01:55 AM ISTಗಣಪತಿ ವಿಸರ್ಜನೆಗೂ ಮುನ್ನ ಪಟ್ಟಣದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ನಡೆದಿದ್ದು, ಪೊಲೀಸ್ ಪೇದೆ ಸೇರಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಲಾಟೆ ವೇಳೆ ಉದ್ರಿಕ್ತರು ನಾಲ್ಕು ಅಂಗಡಿಗಳು, ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವು ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಿಂದಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚುವರಿ ಬಂದೋಬಸ್ತ್ ಕಲ್ಪಿಸಲಾಗಿದೆ.