ಗ್ಯಾಂಗ್ರೇಪ್ ತನಿಖೆಗೆ ಎಸ್ಐಟಿ ರಚಿಸಲು ಬೊಮ್ಮಾಯಿ ಆಗ್ರಹ
Jan 14 2024, 01:35 AM ISTಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಅಲ್ಲದೆ, ಭಾನುವಾರ ನಮ್ಮ ಪಕ್ಷದ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗುತ್ತೇವೆ ಎಂದೂ ಅವರು ತಿಳಿಸಿದ್ದಾರೆ.