ಬೊಮ್ಮಾಯಿ ಹೃದಯಾಘಾತ: ಕೋನರಡ್ಡಿ ವ್ಯಂಗ್ಯ
Oct 29 2023, 01:00 AM ISTಕನ್ನಡಪ್ರಭ ವಾರ್ತೆ ಹುಬ್ಬಳ್ಳಿಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತವಾಗಿರುವುದನ್ನು ಶಾಸಕ ಎನ್.ಎಚ್. ಕೋನರಡ್ಡಿ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ವರ್ಚಸ್ಸು ಕಡಿಮೆಯಾಗಿರುವುದರಿಂದ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೊಳಗಾಗಿದೆ.