ಸೌಜನ್ಯದಿಂದ ವರ್ತಿಸದ ಬ್ಯಾಂಕ್ ಸಿಬ್ಬಂದಿ ವರ್ಗಕ್ಕೆ ಆಗ್ರಹ
Dec 15 2023, 01:30 AM ISTಕನ್ನಡ ಭಾಷೆಯ ಅರಿವು ಇರದ ಹಾಗೂ ಬ್ಯಾಂಕಿಗೆ ಬರುವ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಮತ್ತು ರೈತಾಪಿ ವರ್ಗದವರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದ ಬ್ಯಾಂಕ್ ಸಿಬ್ಬಂದಿ ವರ್ಗವನ್ನ ಇಲ್ಲಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕರವೇ, ರೈತ ಸಂಘದ ವತಿಯಿಂದ ಬ್ಯಾಂಕ್ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಸಂಘದ ಸಂಚಾಲಕ ಬೋರನ ಕೊಪ್ಪಲು ಶಿವಲಿಂಗಪ್ಪ ಅವರ ನೇತೃತ್ವದಲ್ಲಿ ಹಾರನಹಳ್ಳಿ ಯೂನಿಯನ್ ಬ್ಯಾಂಕ್ ಶಾಖೆ ಮುಂದೆ ಸೇರಿದ ಪ್ರತಿಭಟನಾಕಾರರು ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.