ಬ್ಯಾಂಕ್ ದರೋಡೆ ಮಾಡಿದ್ದ ಗ್ಯಾಂಗ್ ಬಂಧನ
Jun 27 2025, 12:49 AM ISTಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಅತಿದೊಡ್ಡ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಒಂದೇ ತಿಂಗಳಲ್ಲಿ ಭೇದಿಸಿರುವ ಜಿಲ್ಲಾ ಪೊಲೀಸರು ಸೂತ್ರದಾರ ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಸೇರಿ ಮೂವರನ್ನು ಪ್ರಆರೋಪಿಗಳನ್ನು ಬಂಧಿಸಿ 10.5 ಕೆಜಿ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 2 ಕಾರು ವಶಪಡಿಸಿಕೊಂಡಿದ್ದಾರೆ.ಘಟನೆ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಅವರು, ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮೇ 23ರಂದು ನಡೆದಿದ್ದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು 8 ತಂಡ ರಚಿಸಲಾಗಿತ್ತು.