3 ವರ್ಷ ಬಳಿಕ ಭಾರತ ವನಿತಾ ತಂಡಕ್ಕೆ ಟೆಸ್ಟ್!
Dec 14 2023, 01:30 AM IST2021ರ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವೊಂದನ್ನು ಆಡಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ, 3 ವರ್ಷಗಳ ಬಳಿಕ ಮತ್ತೊಮ್ಮೆ ಕ್ರಿಕೆಟ್ನ ಸಾಂಪ್ರಾದಾಯಿಕ ಮಾದರಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ (4 ದಿನಗಳ ಪಂದ್ಯ) ಆರಂಭಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಹರ್ಮನ್ಪ್ರೀತ್ ಕೌರ್ ಈ ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.