ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ವಾರ್ಷಿಕ ಶಿಬಿರಕ್ಕೆ ಚಾಲನೆ
Feb 06 2024, 01:30 AM IST ವಿರಾಜಪೇಟೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿರಾಜಪೇಟೆ ವತಿಯಿಂದ ತಾಲೂಕು ಮಟ್ಟದ ಮಕ್ಕಳ ಪ್ರವಿಣತಾ ಪದಕ ಶಿಬಿರ ವಿರಾಜಪೇಟೆ ನಗರದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಬಿರಾರ್ಥಿಗಳು, ತರಬೇತಿದಾರರು, ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳ ಶಿಕ್ಷಕರು, ಹಾಜರಿದ್ದರು.