ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಹೊಂದಿರುವುದು ಭಾರತ
Jan 28 2025, 12:48 AM ISTಭಾರತವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು, ಸಂವಿಧಾನ ರಚಿಸುವಲ್ಲಿ ಡಾ. ಅಂಬೇಡ್ಕರ್ರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ತಿಳಿಸಿದರು.