೨೦೩೦ರ ವೇಳೆಗೆ ಎಚ್ಐವಿ ಮುಕ್ತ ಭಾರತ ದೇಶದ ಗುರಿ-ಸದಾನಂದಸ್ವಾಮಿ
Dec 10 2024, 12:34 AM ISTವಿಶ್ವ ಆರೋಗ್ಯ ಸಂಸ್ಥೆಯು ೨೦೩೦ರ ವೇಳೆಗೆ ಎಚ್.ಐ.ವಿ. ಮುಕ್ತ ಭಾರತ ದೇಶವನ್ನಾಗಿ ಮಾಡುವ ಗುರಿ ಹೊಂದಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಆರೋಗ್ಯ ಇಲಾಖೆ, ಇತರ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್.ಐ.ವಿ., ಏಡ್ಸ್ ಬಗ್ಗೆ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.