ಯೋಗ ಭಾರತೀಯ ಸಂಪ್ರದಾಯ, ಸಂಸ್ಕೃತಿಯ ಕೊಡುಗೆ
Jun 20 2024, 01:16 AM IST2014ರ ಸೆ. 27 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯೋಗವನ್ನು ಅಳವಡಿಸಿಕೊಳ್ಳುವಂತೆ ವಿಶ್ವದ ಎಲ್ಲ ದೇಶಗಳಿಗೆ ಕರೆ ನೀಡಿದರು ಮತ್ತು ಯೋಗ ದಿನವನ್ನು ಪ್ರತಿವರ್ಷ ಆಚರಿಸಬೇಕು ಎಂದು ಪ್ರಸ್ತಾಪಿಸಿದರು. ಪ್ರಸ್ತಾವನೆಯನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಕೇವಲ 90 ದಿನಗಳಲ್ಲಿ ಅಂಗೀಕರಿಸಿತು ಮತ್ತು ಜಾರಿಗೊಳಿಸಿತು. ಅಂದಿನಿಂದ, ದೇಶ ಮತ್ತು ಪ್ರಪಂಚದಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ.